ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಮಂಗ್ಳೂರು- ಬೆಂಗ್ಳೂರು ಹೆದ್ದಾರಿಗೆ ತೇಪೆ ಹಾಕುವ ಬದಲು ಸಂಪೂರ್ಣ ಡಾಂಬರೀಕರಣಗೊಳಿಸಿ"

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ತೇಪೆ ಹಾಕುವುದನ್ನು ಬಿಟ್ಟು ಸಂಪೂರ್ಣ ಡಾಂಬರೀಕರಣಗೊಳಿಸಿ ಸುಸ್ಥಿತಿಗೆ ತರಬೇಕು ಇಲ್ಲವೆ ಚತುಷ್ಪಥ ಹೆದ್ದಾರಿ ಕಾಮಗಾರಿ ಪುನಾರಂಭಿಸುವಂತೆ ಬಂಟ್ವಾಳ ಕ್ಷೇತ್ರ ಎಸ್ ಡಿಪಿಐ 20 ದಿನಗಳ ಗಡುವು ನೀಡಿದೆ.

ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಪಿಐ ದ.ಕ.ಜಿಲ್ಲಾ ಪ್ರ.ಕಾರ್ಯದರ್ಶಿ ಸಾಹುಲ್ ಹಮೀದ್, ಸೆ. 29 ರಂದು ಪಕ್ಷದ ವತಿಯಿಂದ ನಡೆದ ಪ್ರತಿಭಟನೆ ಹಿನ್ನೆಲೆಯಲ್ಲಿ ಇದೀಗ ಹೆದ್ದಾರಿಯಲ್ಲಿರುವ ಬೃಹತ್ ಗಾತ್ರದ ಗುಂಡಿಗೆ ತೇಪೆ ಹಾಕುವ ಕಾರ್ಯ ಆರಂಭಗೊಂಡಿದೆ. ಈ ರೀತಿ ತೇಪೆ ಹಾಕುವುದರಿಂದ ಪ್ರಯೋಜನವಿಲ್ಲ, ಮಳೆ ಸುರಿದರೆ ಮತ್ತೆ ಹೊಂಡ ಪ್ರತ್ಯಕ್ಷವಾಗುವ ಸಾಧ್ಯತೆ ಇದೆ. ಹಾಗಾಗಿ ಮಂಗಳೂರು-ಬೆಂಗಳೂರು ಹೆದ್ದಾರಿ ಡಾಂಬರೀಕರಣಗೊಳಿಸಿ ಸುಸ್ಥಿತಿಗೆ ತಂದು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.

ರಾ.ಹೆ.75ರ ಹಾಸನ-ಸಕಲೇಶಪುರ ಹಾಗೂ ಗುಂಡ್ಯ-ಬಿ.ಸಿ.ರೋಡ್ ನಡುವಣ ಚತುಷ್ಪಥ ರಸ್ತೆ ಕಾಮಗಾರಿ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದು,ಹೆದ್ದಾರಿಯಲ್ಲಿರುವ ಹೊಂಡಗುಂಡಿಯಿಂದ ವಾಹನ ಸಂಚಾರವೇ ದುಸ್ತರವಾಗಿದೆ,ಈಗಾಗಲೇ ಪ್ರತಿನಿತ್ಯ ಅಪಘಾತಗಳಾಗುತ್ತಿದೆ. ಆದರೂ ಸಂಸದರು,ಶಾಸಕರು, ಉಸ್ತುವಾರಿ ಸಚಿವರು ಈ ಬಗ್ಗೆ ಚಕಾರವೆತ್ತದಿರುವುದು ಜನಸಾಮಾನ್ಯರ ಬಗ್ಗೆ ಇವರಿಗಿರುವ ಕಾಳಜಿ ತೋರಿಸುತ್ತಿದೆ ಎಂದು ಬಂಟ್ವಾಳ ಕ್ಷೇತ್ರ ಎಸ್ ಡಿಪಿಐ ಅಧ್ಯಕ್ಷ ಯೂಸುಫ್ ಆಲಡ್ಕ ಟೀಕಿಸಿದರು.

20 ದಿನದೊಳಗಾಗಿ ಹೆದ್ದಾರಿ ಡಾಮರೀಕರಣಗೊಳಿಸಬೇಕು ಇಲ್ಲವೇ ಸ್ಥಗಿತಗೊಂಡಿರುವ ಹೆದ್ದಾರಿ ಕಾಮಗಾರಿ ಪುನಾರಂಭಿಸಬೇಕು ಇಲ್ಲದಿದ್ದಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ವತಿಯಿಂದ ನೆಲ್ಯಾಡಿ,ಉಪ್ಪಿನಂಗಡಿ,ಮಾಣಿ,ಕಲ್ಲಡ್ಕ,ಮೆಲ್ಕಾರ್ ಮೊದಲಾದ ಪ್ರದೇಶಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಪುರಸಭಾ ಸದಸ್ಯ ಮೊನೀಶ್ ಆಲಿ,ಪ್ರ.ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

04/10/2020 08:17 pm

Cinque Terre

3.46 K

Cinque Terre

0

ಸಂಬಂಧಿತ ಸುದ್ದಿ