ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಸಾಹಿತ್ಯ ಕ್ಕೆ ಭಾವನಾತ್ಮಕ ಸಾತ್ವಿಕ ಶಕ್ತಿ ತುಂಬಿದವರೇ ಡಾ.ಎಸ್ .ಪಿ. ಬಾಲಸುಬ್ರಹ್ಮಣ್ಯಂ"

ಮಂಗಳೂರು: ಚಿತ್ರರಂಗದ ಸಾಹಿತ್ಯಗಳಿಗೆ ಭಾವನಾತ್ಮಕವಾಗಿ ಸಾತ್ವಿಕ ಶಕ್ತಿಯನ್ನು ತುಂಬಿದವರೇ ಮಹಾನ್ ಗಾಯಕ ಡಾ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಎಸ್. ಪ್ರದೀಪ ಕುಮಾರ ಕಲ್ಕೂರ ಸಂತಾಪ ಸೂಚಿಸಿದ್ದಾರೆ.

ಮಂಗಳೂರು ನಗರದ ಕೊಡಿಯಾಲ್ ಬೈಲ್ ನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಲಾಗಿದ್ದ " ಎಸ್.ಪಿ.ಬಿ. ಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ" ಕಾರ್ಯಕ್ರಮದಲ್ಲಿ ಅವರು ನುಡಿನಮನ ಸಲ್ಲಿಸಿದರು.

ಭಾರತೀಯ ಭಾಷೆಗಳೆಲ್ಲವನ್ನು ಸಮಾನ ಗೌರವದಿಂದ ಕಂಡಿರುವ ಎಸ್.ಪಿ ವಿಶೇಷವಾಗಿ ನಮ್ಮ ಪ್ರದೇಶದ ತುಳು ಹಾಗು ಕೊಂಕಣಿ ಭಾಷಾ ಚಲನಚಿತ್ರಗಳ ಹಾಡಿಗೆ ತನ್ನ ಕಂಠಸಿರಿಯ ಮೂಲಕ ಕಳೆದ ಸುಮಾರು ನಾಲ್ಕು ದಶಕಗಳಿಂದ ಅವಿಸ್ಮರಣೀಯವಾದ ಕೊಡುಗೆಯನ್ನು ನೀಡಿರುವರು ಎಂದರು.

ಅಮೃತ ಸೋಮೇಶ್ವರ, ಸೀತಾರಾಮ ಕುಲಾಲ್, ವಿಜಯಕುಮಾರ್ ಕೊಡಿಯಾಲ್ ಬೈಲ್ ಸಹಿತ ಅನೇಕ ಸಾಹಿತಿಗಳ ಚಿತ್ರಸಾಹಿತ್ಯಗಳಿಗೆ ಕಂಠದಾನ ಮಾಡುವ ಮೂಲಕ ಅಜರಾಮರಗೊಳಿಸಿದ ಹಿರಿಮೆಯೂ ಬಾಲಸುಬ್ರಹ್ಮಣ್ಯಂ ಅವರಿಗೆ ಸಲ್ಲುತ್ತದೆ ಎಂದರು.

ದಕ್ಷಿಣ ಕನ್ನಡದ ಎಸ್.ಪಿ. ಎಂದೇ ಖ್ಯಾತರಾದ ಗಾಯಕ ರವೀಂದ್ರ ಪ್ರಭು, ವಿವಿಧ ಹಾಡುಗಳನ್ನು ಹಾಡುವ ಮೂಲಕ " ಗಾನ ನಮನ " ಸಲ್ಲಿಸಿದರು. ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ರಂಗಕರ್ಮಿ ವಿ.ಜಿ.ಪಾಲ್, ತುಳು ನಾಟಕ ಹಾಗೂ ಚಿತ್ರಸಾಹಿತಿ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲಬೈಲ್, ಸಂಗೀತ ನಿರ್ದೇಶಕರಾದ ವಸಂತ ಕದ್ರಿ, ಮುರಳೀಧರ ಕಾಮತ್, ರಂಗಭೂಮಿ ಕಲಾವಿದ ತಮ್ಮ ಲಕ್ಷ್ಮಣ್, ಚಿತ್ರ ನಿರ್ಮಾಪಕ ಸುಧಾಕರ ಕುದ್ರೋಳಿ, ಜಿ.ಕೆ.ಭಟ್ ಸೆರಾಜೆ, ತಾರಾನಾಥ ಹೊಳ್ಳ, ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಶೆಟ್ಟಿ, ನವಗಿರಿ ಗಣೇಶ್, ಅಭಿಜಿತ್ ಶೆಣೈ, ದಯಾನಂದ ಕಟೀಲ್, ರಜನಿ ಶೆಣೈ, ನಾಗರಾಜ ಬಸ್ರೂರು ಮೊದಲಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

28/09/2020 08:11 pm

Cinque Terre

4.49 K

Cinque Terre

0

ಸಂಬಂಧಿತ ಸುದ್ದಿ