ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ವಿಟ್ಲ ಎಸ್ ಡಿ ಪಿ ಐ ಕಚೇರಿಗೆ ಬೆಂಕಿ ಹಚ್ಚಿದ ಘಟನೆ ಖಂಡಿಸಿ ಪ್ರತಿಭಟನೆ: ಬಿಜೆಪಿ-ಸಂಘ ಪರಿವಾರದ ಕೃತ್ಯ: ಎಸ್ ಡಿ ಪಿ ಐ

ಬಂಟ್ವಾಳ: ಕಿಡಿಗೇಡಿಗಳು ವಿಟ್ಲ ಎಸ್ ಡಿ ಪಿ ಐ ಕಚೇರಿಗೆ ಬೆಂಕಿ ಹಚ್ಚಿದ ಘಟನೆಯನ್ನು ಖಂಡಿಸಿ ವಿಟ್ಲ ವಲಯ ಎಸ್ ಡಿ ಪಿ ಐ ವತಿಯಿಂದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಂಘಪರಿವಾರ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ವಿಟ್ಲ ಪೊಲೀಸ್ ಠಾಣೆಗೆ ರ್ಯಾಲಿ ನಡೆಸಲು ಮುಂದಾಗುತ್ತಿದ್ದಂತೆ ಸ್ಥಳಕ್ಕೆ ಬಂದ ವಿಟ್ಲ ಪೊಲೀಸರು ಪ್ರತಿಭಟನೆ ಹಿಂತೆಗೆಯುವಂತೆ ಮನವಿ ಮಾಡಿದರು.

ಎಸೈ ರಾಜೇಶ್ ಕೆ.ವಿ ಅವರು ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿ ತಕ್ಷಣವೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.

24 ಗಂಟೆಯೊಳಗಡೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಬಳಿಕ ಮಾತನಾಡಿದ ಎಸ್ ಡಿ ಪಿ ಐ ಮುಖಂಡ ಖಲಂದರ್ ಪರ್ತಿಪ್ಪಾಡಿ ಅವರು ರಾಜ್ಯ ಹಾಗೂ ಜಿಲ್ಲೆಯಲ್ಲಿ ಪಕ್ಷದ ಬೆಳವಣಿಗೆಯನ್ನು ಸಹಿಸಲಾಗದ ತಂಡದಿಂದ ಈ ಕೃತ್ಯ ನಡೆದಿದೆ.‌ ಇದರ ಹಿಂದೆ ಸಂಘಪರಿವಾರ ಬಿಜೆಪಿ ವಿವಿಧ ಷಡ್ಯಂತ್ರವನ್ನು ಮಾಡುತ್ತಿದೆ.

ಇದರ ಮುಂದುವರಿದ ಭಾಗವಾಗಿ ಈ ಕೃತ್ಯ ಎಸೆಗಿದ್ದಾರೆ ಎಂದು ದೂರಿದರು.

ಶಾಕೀರ್ ಅಳಕೆಮಜಲ ಶಾಕೀರ್ ಅಳಕೆಮಜಲು ಮಾತನಾಡಿ ಈ ಕೃತ್ಯದ ಹಿಂದೆ ಸಂಘಪರಿವಾರ ಬಿಜೆಪಿ ಇರುವುದು ಖಚಿತವಿದೆ.

ಪಕ್ಷವನ್ನು ದಮನಿಸಲು ಬೆಂಕಿ ಅಥವಾ ಬೇರೇನು ನಡೆಸಿದರೂ ಎಸ್ ಡಿ ಪಿ ಐ ಜಗ್ಗುವುದಿಲ್ಲ. ಬಿಜೆಪಿಯ ಕೆಲವು ನಾಯಕರ ಪ್ರಚೋದಕಾರಿ ಹೇಳಿಕೆಗಳಿಂದ ಇಂತಹ ಕೃತ್ಯಗಳು ನಡೆಯುತ್ತಿದೆ ಎಂದರು.

ಪುತ್ತೂರು ನಗರ ಸಮಿತಿ ಅಧ್ಯಕ್ಷ ಬಶೀರ್ ಕೂರ್ನಡ್ಕ, ಅಝೀಜ್ ಕಡಂಬು ರಹೀಂ ವಿಟ್ಲ, ರಫೀಕ್ ಪೊನ್ನೋಟ್ಟು ಮೊದಲಾದವರು ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

04/01/2021 11:39 am

Cinque Terre

18.89 K

Cinque Terre

0