ಮಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಮಾಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ನೇತೃತ್ವದಲ್ಲಿ ಕೋಟಿ-ಚೆನ್ನಯ ಸಂಚಲನ ಸಮಿತಿ ಸಹಯೋಗದೊಂದಿಗೆ ಡಿ.7ರಂದು ಬಜ್ಪೆ ವಿಮಾನ ನಿಲ್ದಾಣದವರೆಗೆ ಬೈಕ್ ರ್‍ಯಾಲಿ ಆಯೋಜಿಸಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಚಲನ ಸಮಿತಿ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್, ಡಿ.7ರಂದು ಬೆಳಿಗ್ಗೆ 10ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಹೊರಡುವ ಬೈಕ್ ರ್‍ಯಾಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಾಗಲಿದೆ. ರ್ಯಾಲಿಯಲ್ಲಿ ಕನಿಷ್ಠ 500 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಚಲನ ಸಮಿತಿ ಉಪಾಧ್ಯಕ್ಷ ಸೂರಜ್ ಕಲ್ಯ, ಬಿಲ್ಲವ ಬ್ರಿಗೇಡ್ ಅಧ್ಯಕ್ಷ ಜೀವನ್ ಪೂಜಾರಿ ಮೊದಲಾದವರಿದ್ದರು.
Kshetra Samachara
01/12/2020 09:18 pm