ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ ಬೋಟ್ ದುರಂದಲ್ಲಿ ಮಡಿದವರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಿ: ಡಿವೈಎಫ್‌ಐ ಆಗ್ರಹ

ಮಂಗಳೂರು: ಉಳ್ಳಾಲದಲ್ಲಿ ನಡೆದ ಬೋಟ್ ಮುಳುಗಡೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ೨೫ ಲಕ್ಷ ರೂ. ಪರಿಹಾರ ನೀಡುವಂತೆ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಮುದ್ರದಲ್ಲಿ ಮೀನು ಹಿಡಿಯುವ ಮೀನುಗಾರರು ಅಪಾಯದ ಕೆಲಸದಲ್ಲಿ ತೊಡಗಿದವರಾಗಿದ್ದಾರೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಬೋಟ್‌ಗಳಲ್ಲಿ ಕೆಲಸ ಮಾಡುತ್ತಿರುವವರು ಬಹುತೇಕರು ಬಡವರಾಗಿದ್ದು, ಮೀನುಗಾರಿಕೆಯೇ ಅವರಿಗೆ ಅನ್ನ ನೀಡುತ್ತಿದೆ. ಅನ್ನದ ಹೊರತು ಕಾರ್ಮಿಕರಿಗೆ ಯಾವುದೇ ಭದ್ರತೆ ಇರುವುದಿಲ್ಲ. ಮೃತರ ಕುಟುಂಬ ನಿರ್ವಹಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಧನವನ್ನು ವಿತರಿಸಬೇಕೆಂದು ಆಗ್ರಹಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

02/12/2020 10:50 pm

Cinque Terre

3.22 K

Cinque Terre

0