ಮಂಗಳೂರು: ತಲಪಾಡಿ ಟೋಲ್ ಗೇಟ್‌ನಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆ ಇಂಟೆಕ್ ಡಿಸೆಂಬರ್ 12ರಂದು ಟೋಲ್‌ಗೇಟ್ ಬಳಿ ಪ್ರತಿಭಟನೆ ನಡೆಸಲಿದೆ ಎಂದು ಯೂತ್ ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೇಳಿದ್ದಾರೆ.
ತೊಕ್ಕೊಟ್ಟಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋರ್ಟ್ ಆದೇಶದ ಪ್ರಕಾರ ಸ್ಥಳೀಯ ನಿವಾಸಿಗಳ ವಾಹನಗಳಿಗೆ ಉಚಿತವಾಗಿ ಪಾಸ್ ನೀಡಬೇಕು. ಆದರೆ ತಲಪಾಡಿ ಟೋಲ್‌ಗೇಟ್‌ನಲ್ಲಿ ತಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗಷ್ಟೇ ಉಚಿತ ಪಾಸ್ ನೀಡಲಾಗಿದ್ದು, ಇದನ್ನು ಶೀಘ್ರ 3 ಕಿ.ಮೀ.ವರೆಗಿನ ವ್ಯಾಪ್ತಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಮಂಗಳೂರು ವಿಧಾನ ಸಭಾ ಕ್ಷೇತ್ರ ಇಂಟೆಕ್ ಅಧ್ಯಕ್ಷ ಹರೀಶ್ ರಾವ್, ಯೂತ್ ಇಂಟೆಕ್ ಅಧ್ಯಕ್ಷ ಸಿದ್ದೀಕ್ ಹಸನ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಯೂತ್ ಇಂಟೆಕ್ ಅಧ್ಯಕ್ಷ ಪುನೀತ್ ಶೆಟ್ಟಿ, ಯೂತ್ ಇಂಟೆಕ್ ಪ್ರಧಾನ ಕಾರ್ಯದರ್ಶಿ ಮುನೀರ್ ಬಾವ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
03/12/2020 10:19 pm