ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಜಿಲ್ಲಾ ಮಟ್ಟದ ರೈತರ ಸಭೆ, ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲಕ್ಕೆ ನಿರ್ಧಾರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದ ಸಭೆ ಭಾನುವಾರ ಬಂಟ್ವಾಳದ ಪ್ರವಾಸಿ ಮಂದಿರದಲ್ಲಿ ಸಿಐಟಿಯುನ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಅದ್ಯಕ್ಷತೆಯಲ್ಲಿ ನಡೆಯಿತು.

ಡಿ.8ರಂದು ಅಖಿಲ ಭಾರತ ರೈತರ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿದ ಭಾರತ ಬಂದ್‌ಗೆ ಸಂಪೂರ್ಣ ಬೆಂಬಲವಾಗಿ ಜಿಲ್ಲೆಯ ಒಕ್ಕೂಟವು ಅಂದು ಮಂಗಳೂರಿನ ನಂತೂರು ಸರ್ಕಲ್‌ನಲ್ಲಿ ರಾಸ್ತಾ ರೋಕೋ ಚಳುವಳಿ ನಡೆಸುವ ಮೂಲಕ ಬೆಂಬಲ ನೀಡುವುದಾಗಿ ತೀರ್ಮಾನಿಸಲಾಯಿತು. ರೈತ -ದಲಿತ- ಕಾರ್ಮಿಕ ಐಕ್ಯ ಹೋರಾಟ ವೇದಿಕೆಯಿಂದ ಡಿ.7ರಿಂದ 15ರವರೆಗೆ ಬೆಂಗಳೂರಿನ ಮೌರ್ಯ ವೃತ್ತದ ಬಳಿಯಿರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ತನಕ ನಿರಂತರ ಧರಣಿ ಸತ್ಯಾಗ್ರಹಕ್ಕೆ ಜಿಲ್ಲೆಯಿಂದ ನೂರಾರುಜನ ರೈತ ಕಾರ್ಯಕರ್ತರು ಹಂತ ಹಂತವಾಗಿ ಭಾಗವಹಿಸಲಿದ್ದಾರೆ ಎಂದು ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್, ಯಾದವ ಶೆಟ್ಟಿ ಮತ್ತು ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಒಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್ ಹಾಗೂ ತಾಲೂಕುಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Edited By : Vijay Kumar
Kshetra Samachara

Kshetra Samachara

06/12/2020 04:20 pm

Cinque Terre

3.7 K

Cinque Terre

0