ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಚಿ: ಕೃಷಿಕ, ಉತ್ತಮ ಆಡಳಿತಗಾರ ನೂಜಿಬೈಲು ಈಶ್ವರ ಭಟ್ (101) ನಿಧನ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿಬೈಲು ಮನೆತನದ ಹಿರಿಯ ವ್ಯಕ್ತಿ ನೂಜಿಬೈಲು ಈಶ್ವರ ಭಟ್ (101) ಸ್ವಗೃಹದಲ್ಲಿ ಶುಕ್ರವಾರ ಬೆಳಗ್ಗೆ ನಿಧನರಾದರು. ಅವರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ.

ಕೃಷಿಕರಾಗಿ, ಮಾರ್ಗದರ್ಶಕರಾಗಿ, ಸಮಾಜದ ಗಣ್ಯ ವ್ಯಕ್ತಿಯಾಗಿ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಮಂಚಿ ಸರ್ಕಾರಿ ಪ್ರೌಢಶಾಲೆಯ ಸ್ಥಾಪಕರಲ್ಲೊಬ್ಬರಾಗಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೂರು ದಶಕಗಳಷ್ಟು ಕಾಲ ನೂಜಿಬೈಲು ಹಿರಿಯ ಪ್ರಾಥಮಿಕ ಶಾಲೆ ಸಂಚಾಲಕರಾಗಿದ್ದ ಅವರು ಜನಾನುರಾಗಿಯಾಗಿದ್ದರು.

Edited By : Vijay Kumar
Kshetra Samachara

Kshetra Samachara

19/12/2020 08:37 pm

Cinque Terre

6.02 K

Cinque Terre

0