ಮಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬುದಾಗಿ ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನಿವೃತ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಅವರು ಎಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ತಮ್ಮ ಅನುಭವದ ಜ್ಞಾನವನ್ನು ನೀಡುವಂತೆ ವಿನಂತಿಸಿದರು.
ಅಲ್ಲದೆ ನಿವೃತ್ತ ಪೊಲೀಸ್ ಅಧಿಕಾರಿಗಳು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿರಂತರ ಸಂಪರ್ಕವಿರುವಂತೆ ಕೋರಿಕೊಂಡಿದ್ದಾರೆ.
ಪೊಲೀಸ್ ಆಯುಕ್ತರ ಮನವಿಗೆ ನಿವೃತ್ತ ಪೊಲೀಸ್ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
Kshetra Samachara
05/01/2021 08:45 am