ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ನಿವೃತ್ತ ಪೊಲೀಸ್ ಅಧಿಕಾರಿ ವಾಮನ ಸಾಲಿಯನ್ ನಿಧನ

ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದ ಅಡ್ವೆ ನಿವಾಸಿ ವಾಮನ ಸಾಲ್ಯಾನ್(66) ಅನಾರೋಗ್ಯದಿಂದಾಗಿ ಸೋಮವಾರ ನಿಧನರಾದರು.

ಅವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ರೌಡಿ ನಿಗ್ರಹ ದಳದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಎಎಸ್ಐಯಾಗಿ ನಿವೃತ್ತಿ ಹೊಂದಿ ಬಳಿಕ ಮುದರಂಗಡಿಯಲ್ಲಿ ನೆಲೆಸಿದ್ದರು. ಪಲಿಮಾರು ಶಾಲೆಯ ಹಳೆ ವಿದ್ಯಾರ್ಥಿ, ಉತ್ತಮ ವಾಗ್ಮಿ, ಕ್ರೀಡಾಪಟು, ಉತ್ತಮ ಈಜುಗಾರರಾಗಿದ್ದರು.

Edited By : Nagaraj Tulugeri
Kshetra Samachara

Kshetra Samachara

11/01/2021 09:12 pm

Cinque Terre

4.26 K

Cinque Terre

0