ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಷಿಕೆರೆ: ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಂಘಟನೆಗಳ ಪಾತ್ರ ಮುಖ್ಯ; ಉಮಾನಾಥ ಕೋಟ್ಯಾನ್

ಮುಲ್ಕಿ: ಮುಲ್ಕಿ ಸಮೀಪದ ಪಕ್ಷಿಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ವಿನಾಯಕ ಮಿತ್ರ ಮಂಡಳಿಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಪಕ್ಷಿಕೆರೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರಗಿರಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಸೀತಾರಾಮ್ ಶೆಟ್ಟಿ ವಹಿಸಿದ್ದರು. ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಂಘಟನೆಗಳ ಪಾತ್ರ ಮುಖ್ಯ ಎಂದರು.

ಮಾಜಿ ಜಿ ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಭುವನಾಭಿರಾಮ ಉಡುಪ, ಸೂರ್ಯಕುಮಾರ್ ಹಳೆಯಂಗಡಿ, ಕೊರಗಪ್ಪ ಮೇಸ್ತೃೀ, ಕೆಮ್ರಾಲ್ ಗ್ರಾ ಪಂ ಉಪಾಧ್ಯಕ್ಷ ಸುರೇಶ್ ಪಂಜ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಶ್ರೀ ಗಣಪತಿ ಆಚಾರ್ಯ, ಪ್ರಧಾನ ಅರ್ಚಕ ವಾಸು ಭಟ್ ಪಂಜ, ಮಂಡಳಿಯ ಗೌರವಾಧ್ಯಕ್ಷ ಧನಂಜಯ ಪಿ ಶೆಟ್ಟಿಗಾರ್, ವಿನಾಯಕ ಮಿತ್ರ ಮಂಡಳಿಯ ಅಧ್ಯಕ್ಷ ಚಂದ್ರಹಾಸ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/10/2021 06:24 pm

Cinque Terre

1.37 K

Cinque Terre

0