ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು:"ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನಿರಂತರ"

ಮುಲ್ಕಿ: ಮುಲ್ಕಿ ಸಮೀಪದ ಪಡುಪಣಂಬೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಪಣಂಬೂರು ಕಾರ್ಯಕ್ಷೇತ್ರದ ವತಿಯಿಂದ 10ನೇ ತೋಕೂರಿನ ಸುಬ್ರಮಣ್ಯ ಸ್ವ ಸಹಾಯ ಸಂಘದ ಸದಸ್ಯರಾದ ರತಿ ರವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ರೂ. 40.000/- ಚೆಕ್ ನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಯವರು ವಿತರಿಸಿದರು

ಈ ಸಂದರ್ಭ ಅವರು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನೀಡುವ ಸೇವೆ ನಿರಂತರವಾಗಿ ನಡೆಯಲಿದೆ ಎಂದರು.

ಯೋಜನಾಧಿಕಾರಿ ರವಿ, ಮೇಲ್ವಿಚಾರಕ ಚಂದ್ರಶೇಖರ, ಸೇವಾಪ್ರತಿನಿದಿ ಸವಿತಾ ಶರತ್ ಬೆಳ್ಳಾಯರು, ಒಕ್ಕೂಟದ ಅದ್ಯಕ್ಷ ಲತಾ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/02/2022 07:56 pm

Cinque Terre

2.14 K

Cinque Terre

0