ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈಲೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ
(ಪರಿಸರ ಸ್ವಚ್ಛತೆ, ಕೈ ತೊಳೆಯುವ ಬಗ್ಗೆ ಮಾಹಿತಿ, ವೈಯಕ್ತಿಕ ಸ್ವಚ್ಛತೆ) ಕುರಿತು ಅರಿವು ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷ ಮನೋಹರ ಕೋಟ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಬಿ, ಸಮುದಾಯ ಆರೋಗ್ಯ ಆಧಿಕಾರಿ ವಿಲ್ಮಾ, ಶಾಲಾ ಶಿಕ್ಷಕರು,ಆರೋಗ್ಯ ಸಹಾಯಕಿ ನಾಗವೇಣಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
04/06/2022 12:35 pm