ಮೂಡುಬಿದಿರೆ: ಮಾದಕ ವ್ಯಸನ ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತದೆ, ಇದರ ಚಟದಿಂದ ಹೊರಬರುವುದು ಕಷ್ಟಕರ ಎಂದು ಮಂಗಳೂರಿನ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ್ ಭಟ್ ಹೇಳಿದರು.
ಅವರು ಆಳ್ವಾಸ್ ಕಾಲೇಜಿನ ಪುನರ್ಜನ್ಮ ಡಿಎಡಿಕ್ಷನ್ ಸೆಂಟರ್‌ನಿಂದ ಆಯೋಜಿಸಿದ `ಮಲ್ಟಿ ಡಿಸಿಪ್ಲಿನರಿ ಅಪ್ರೋಚ್ ಫಾರ್ ಎಡಿಕ್ಷನ್ ಮ್ಯಾನೇಜ್ಮೆಂಟ್’ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಮಾದಕ ದ್ರವ್ಯ ವ್ಯಸನವು ಆರೋಗ್ಯದ ದೃಷ್ಠಿಯಲ್ಲಿ ಒಳ್ಳೆಯದಲ್ಲ. ಮಾದಕ ದ್ರವ್ಯಗಳ ಸೇವನೆಯು ಸಮಾಜದ ಆರೋಗ್ಯಕ್ಕೂ ಪರಿಣಾಮ ಬೀರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಮಾದಕ ದ್ರವ್ಯಗಳ ಬಗ್ಗೆ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಮಕ್ಕಳು ಮತ್ತು ಯುವಕರು ಮಾದಕ ದ್ರವ್ಯಗಳತ್ತ ಆಕರ್ಷಿತರಾಗುವುದು ಅಪಾಯಕಾರಿ ಬೆಳವಣಿಗೆ ಎಂದರು.
ಕಾರ್ಯಕ್ರಮದಲ್ಲಿ ಆಳ್ವಾಸ್ ನ್ಯಾಚುರೋಪತಿ ಆ್ಯಂಡ್ ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ರೋಶನ್ ಪಿಂಟೋ, ಮೂಡುಬಿದಿರೆ ಸರ್ಕಲ್ ಇನ್ಸ್ಪೆಕ್ಟರ್ ನಿರಂಜನ್ ಕುಮಾರ್ ಉಪಸ್ಥಿತರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ಹಾಗೂ ವೈದ್ಯ ಡಾ ವಿನಯ್ ಆಳ್ವ ಸ್ವಾಗತಿಸಿದರು. ಬಿಎಸ್‌ಡಬ್ಲೂö್ಯ ವಿದ್ಯಾರ್ಥಿನಿ ಆಳ್ವಾಸ್ ಪುನರ್ಜನ್ಮದ ಆಪ್ತ ಸಮಾಲೋಚಕ ಲೋಹಿತ್ ವಂದಿಸಿ, ಸಿಸ್ಟರ್ ಆ್ಯಂಜಲಿನಾ ನಿರೂಪಿಸಿದರು.
Kshetra Samachara
04/07/2022 10:46 pm