ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಎರಡು ವರ್ಷ ಕಳೆದರೂ ಸ್ಮಾರ್ಟ್ ಸಿಟಿಯ ಒಂದೇ ಒಂದು ಯೋಜನೆ ಪೂರ್ಣಗೊಂಡಿಲ್ಲ. ಅಷ್ಟೇ ಅಲ್ಲದೆ ಯೋಜನೆಯ ಹಿಂದಿನ ಅಂದಾಜು ವೆಚ್ಚವು ಈಗ ಲೆಕ್ಕಾಚಾರದ ಪ್ರಕಾರ ಪಟ್ಟು ಹೆಚ್ಚಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಅನುಮಾನ ಇರುವುದರಿಂದ ಎಸಿಬಿ ಅಥವಾ ಲೋಕಾಯುಕ್ತರು ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
Kshetra Samachara
08/10/2020 06:36 pm