ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗ್ಳೂರಿಗೆ ಸಿಎಂ ಯೋಗಿ ಬಂದ್ರೆ ಮುಖಕ್ಕೆ ಮಸಿ ಬಳಿಯುವೆ: ಮಿಥುನ್ ರೈ

ಮಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಮತ್ತು ಕರಾವಳಿಯ ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿವೆ.

ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆ ವೇಳೆ ಮಿಥುನ್ ರೈ ಏಕವಚನದಲ್ಲಿಯೇ ಸಿಎಂ ಯೋಗಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. "ಮಂಗಳೂರಿಗೆ ಯೋಗಿ ಬಂದ್ರೆ ನಾನೇ ಅವರ ಮುಖಕ್ಕೆ ಮಸಿ ಬಳಿಯುವೆ. ಕರ್ನಾಟಕಕ್ಕೆ ಕಾಲಿಟ್ಟರೆ ನಮ್ಮ ಕಾರ್ಯಕರ್ತರು ಮಸಿ ಬಳಿಯುತ್ತಾರೆ" ಎಂದು ತುಳು ಭಾಷೆಯಲ್ಲಿ ಭಾಷಣ ಮಾಡಿದ್ದರು.

ಸಿಎಂ ಯೋಗಿ ಆದಿತ್ಯನಾಥ್ ಅವರು ನಾಥ ಪರಂಪರೆಯ ಪರಮೋಚ್ಛ ಗುರು. ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠವೂ ಅದರ ಕೇಂದ್ರವಾಗಿದೆ. ಮಿಥುನ್ ರೈ ಹೇಳಿಕೆ ನಾಥ ಸಂಪ್ರದಾಯ ಮತ್ತು ಹಿಂದೂ ಸಮಾಜಕ್ಕೆ ಮಾಡಿದ ಅಪಮಾನ. ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಹಿಂದೂ ಸಂಘಟನೆಗಳು ಕಿಡಿಕಾರಿವೆ.

Edited By : Vijay Kumar
Kshetra Samachara

Kshetra Samachara

10/10/2020 03:33 pm

Cinque Terre

7.07 K

Cinque Terre

2

ಸಂಬಂಧಿತ ಸುದ್ದಿ