ಬೆಳ್ತಂಗಡಿ: ಕೊರೊನಾ ಮಹಾಮಾರಿಯಿಂದ ದೇಶ, ವಿದೇಶಗಳಲ್ಲಿ ಉದ್ಯೋಗದಲ್ಲಿದ್ದ ಸಾವಿರಾರು ಮಂದಿ ನೌಕರಿ ಕಳೆದುಕೊಂಡಿದ್ದಾರೆ. ಸದ್ಯ ಆತ್ಮನಿರ್ಭರ ಯೋಜನೆ ಅಡಿ ರಾಜ್ಯಕ್ಕೆ 3,500 ಕೋಟಿ ರೂ.ಸಿಗಲಿದ್ದು, ಈ ಪೈಕಿ ಮೀನುಗಾರಿಕಾ ವಲಯದಲ್ಲಿ ಹತ್ತು ಸಾವಿರ ಉದ್ಯೋಗ ಸೃಷ್ಟಿಗೆ ಚಿಂತಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದ ಲಲಿತೋದ್ಯಾನದಲ್ಲಿ ಮತ್ಸ್ಯ ಪ್ರದರ್ಶನಾಲಯವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಸಚಿವರು, 'ಒಳನಾಡು ಮೀನುಗಾರಿಕೆಯಲ್ಲಿ ರಾಜ್ಯ ಒಂಬತ್ತನೇ ಸ್ಥಾನದಲ್ಲಿದ್ದು, ಸಮುದ್ರ ಮೀನುಗಾರಿಕೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿ ಮೀನುಮರಿ ಉತ್ಪಾದಿಸಲು ಚಿಂತಿಸಲಾಗುತ್ತಿದೆ. ಅಲಂಕಾರಿಕ ಮೀನುಗಳಲ್ಲಿಯೂ ಉದ್ಯೋಗ ಸೃಷ್ಟಿ ಸಾಧ್ಯವಿದೆ' ಎಂದು ಮಾಹಿತಿ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವಿವಿಧ ಅಪರೂಪದ ಮೀನುಗಳ ಸಂರಕ್ಷಣೆಗೆ ಆದ್ಯತೆ ನೀಡುತ್ತಿರುವುದು ಸರ್ಕಾರದ ಹೊಸ ಮೀನುಗಾರಿಕಾ ಅಭಿವೃದ್ಧಿಯ ಚಿಂತನೆಗೆ ಸ್ಫೂರ್ತಿ ಎಂದು ಹೇಳಿದರು.
Kshetra Samachara
12/10/2020 05:09 pm