ಬಂಟ್ವಾಳ: ಮಾಣಿ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಆಶ್ರಯದಲ್ಲಿ, ಮಾಣಿ ಗ್ರಾಪ ಕಚೇರಿ ಮುಂಭಾಗ ರಾಜ್ಯ ಸರಕಾರದ ಪಂಚಾಯತ್ ರಾಜ್ ವ್ಯವಸ್ಥೆಯ ವೈಫಲ್ಯ ವಿರುದ್ಧ ಮತ್ತು ಜನಸಾಮಾನ್ಯರ ಹಲವು ಸಮಸ್ಯೆ ಶೀಘ್ರ ಪರಿಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮುಖಾಂತರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ, ಮಾಜಿ ಪಂ. ಸದಸ್ಯರಾದ ಇಬ್ರಾಹಿಂ ಕೆ.ಮಾಣಿ, ರಮಣಿ, ಪ್ರೀತಿ ಡಿನ್ನಾ ಪಿರೇರಾ, ಸುನಂದ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಬ್ದುಲ್ ಅಜೀಜ್, ಅಬ್ದುಲ್ ರಝಾಕ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/10/2020 10:34 am