ಮುಲ್ಕಿ: ಭಾರತ ಸರಕಾರ, ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ವತಿಯಿಂದ ಹಳೆಯಂಗಡಿಯ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಜೈ ತುಳುನಾಡು ಸಹಕಾರದಲ್ಲಿ "ಬಲೆ ತುಳು ಲಿಪಿ ಕಲ್ಪುಗ" ಕಾರ್ಯಾಗಾರದ ಉದ್ಘಾಟನೆ ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್, ಸುವರ್ಣ ಮಹೋತ್ಸವ ಸಮಿತಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಹಾಗೂ ಜಿಲ್ಲಾ ಪ್ರಶಸ್ತಿ ವಿಜೇತ ಯುವತಿ ಮತ್ತು ಮಹಿಳಾ ಮಂಡಲದ ಸಹಕಾರದಲ್ಲಿ ಯುವಕ ಮಂಡಲ ಸಭಾಂಗಣದಲ್ಲಿ ಜರುಗಿತು.
ಬಲೆ ತೆಲಿಪಾಲೆ ಖ್ಯಾತಿಯ ನಿರೂಪಕ ನವೀನ್ ಶೆಟ್ಟಿ ಎಡ್ಮೇಮಾರ್ ಉದ್ಘಾಟಿಸಿ ಮಾತನಾಡಿ, ತುಳು ಭಾಷೆ ಉಳಿಸಿ, ಬೆಳೆಸುವ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು. ತುಳು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
ಅಧ್ಯಕ್ಷತೆ ವಹಿಸಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸರ್ ಮಾತನಾಡಿ, ತುಳು ಭಾಷೆ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು, ಭಾರತದ ಪ್ರಾಚೀನ ಭಾಷೆಗಳಲ್ಲಿ ಸ್ಥಾನ ಪಡೆದಿದೆ.
ತುಳು ಲಿಪಿ ಕಲಿಕೆ ಬಗ್ಗೆ ಅನೇಕ ತುಳುವರ ಸಂಘಟನೆಗಳು ಹಲವು ವರ್ಷಗಳಿಂದ ದುಡಿಯುತ್ತಿದೆ. ತುಳು ಭಾಷೆ ಎಂಟನೇ ಪರಿಚ್ಛೇದದಲ್ಲಿ ಸೇರಿಸುವಲ್ಲಿ ಅಕಾಡೆಮಿ ಮತ್ತು ಸಂಘಟನೆಗಳೊಂದಿಗೆ ಎಲ್ಲಾ ಸಂಸ್ಥೆಗಳು ಕೈ ಜೋಡಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಾಗೇಶ್ ಕುಲಾಲ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನರೇಂದ್ರ ಕೆರೆಕಾಡು ಹಾಗೂ ಜೈ ತುಳುನಾಡು ಸಂಸ್ಥೆ ಅಧ್ಯಕ್ಷ ಸುದರ್ಶನ ಸುರತ್ಕಲ್, ಮಂಗಳೂರು ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್ ಪೇಟೆ , ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಗೌರವಾಧ್ಯಕ್ಷ ಪ್ರಕಾಶ್ ಏನ್ ಶೆಟ್ಟಿ, ಅಧ್ಯಕ್ಷ ಯತೀಶ್ ಕೋಟ್ಯಾನ್, ಕಾರ್ಯಾಧ್ಯಕ್ಷ ಸುಧಾಕರ ಆರ್. ಅಮೀನ್, ಸಲಹಾ ಸಮಿತಿ ಅಧ್ಯಕ್ಷ ಸದಾಶಿವ ಅಂಚನ್ ಚಿಲಿಂಬಿ, ಯುವತಿ ಮಂಡಲ ಅಧ್ಯಕ್ಷೆ ದಿವ್ಯಶ್ರೀ ರಮೇಶ್ ಕೋಟ್ಯಾನ್, ಮಹಿಳಾ ಮಂಡಲ ಅಧ್ಯಕ್ಷೆ ರೇಷ್ಮಾ ಅಶ್ರಫ್ ಉಪಸ್ಥಿತರಿದ್ದರು.ಜೈ ತುಳುನಾಡು ಸಂಸ್ಥೆ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಪ್ರಸ್ತಾವನೆ ಮಾಡಿದರು.
ಯುವಕ ಮಂಡಲ ಅಧ್ಯಕ್ಷ ಯತೀಶ್ ಕೋಟ್ಯಾನ್ ಸ್ವಾಗತಿಸಿದರು.
ಪ್ರಧಾನ ಕಾರ್ಯದರ್ಶಿ ರಾಮದಾಸ್ ಪಾವಂಜೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಇಂದೂಧರ ಕಿಣಿ ವಂದಿಸಿದರು. ಈ ಸಂದರ್ಭ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು, ಸದಸ್ಯರನ್ನು ಗೌರವಿಸಲಾಯಿತು.
ಕಾರ್ಯಾಗಾರದ ಮುಂದುವರಿದ ಅಂಗವಾಗಿ ತುಳು ಲಿಪಿ ಕಲಿಕೆ ತರಗತಿ ನಡೆಯಲಿವೆ ಎಂದು ಯುವಕ ಮಂಡಲದ ಅಧ್ಯಕ್ಷರು ತಿಳಿಸಿದ್ದಾರೆ.
Kshetra Samachara
19/10/2020 09:40 am