ಮುಲ್ಕಿ: ಪ್ರಧಾನಿ ನರೇಂದ್ರ ಮೋದಿಯವರು ಡ್ರಗ್ಸ್ ಜಾಲವನ್ನು ದೇಶದಿಂದಲೇ ಕಿತ್ತು ಹಾಕಲು ಸಂಕಲ್ಪಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಆದರೆ ಸರಕಾರ ಮತ್ತು ಪೊಲೀಸ್ ಇಲಾಖೆಯಿಂದ ಮಾತ್ರ ಈ ಕೆಲಸ ಆಗುವಂತದ್ದಲ್ಲ. ಸಮಾಜ, ಶಿಕ್ಷಕರು, ಮಕ್ಕಳ ಪೋಷಕರು ಕೂಡ ಸಹಕರಿಸಿದರೆ ಡ್ರಗ್ಸ್ ಮುಕ್ತ ದೇಶವನ್ನಾಗಿ ಮಾಡಲು ಸಾಧ್ಯ ಎಂದು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಹೇಳಿದರು.
ಅವರು ಬಿಜೆಪಿ ಯುವ ಮೋರ್ಚಾ ವತಿಯಿಂದ ಮಣಿಪಾಲದ ಟೈಗರ್ ಸರ್ಕಲ್ ನಲ್ಲಿ ನಡೆದ ಡ್ರಗ್ಸ್ ಮುಕ್ತ ಉಡುಪಿ ಅಭಿಯಾನದ ಜನಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲೆಯ ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.
Kshetra Samachara
25/10/2020 05:40 pm