ಬಂಟ್ವಾಳ: ಕೆಲ ದಿನಗಳ ಹಿಂದೆ ಇತಿಹಾಸ ಪ್ರಸಿದ್ಧ ಕಾರಿಂಜ ದೇವಸ್ಥಾನದ ಪಕ್ಕದ ತಡೆಗೋಡೆ ಗಾಳಿ, ಮಳೆಗೆ ಕುಸಿದಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ವೀಕ್ಷಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅ.26ರ ಸೋಮವಾರ ಬೆಳಗ್ಗೆ 9.30ಕ್ಕೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉಪಸ್ಥಿತರಿರುವರು. ಇಲಾಖಾಧಿಕಾರಿಗಳು ಜೊತೆಗಿರುವರು ಎಂದು ಬಂಟ್ವಾಳ ಶಾಸಕ ಕಚೇರಿ ಪ್ರಕಟಣೆ ತಿಳಿಸಿದೆ.
Kshetra Samachara
25/10/2020 07:50 pm