ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕಾರಿಂಜ ಆಸುಪಾಸಿನ ಕ್ವಾರಿಗಳಿಗೆ ತಾತ್ಕಾಲಿಕ ತಡೆ; ಸಚಿವ ಕೋಟ ಸೂಚನೆ

ಬಂಟ್ವಾಳ: ಎಲ್ಲಾ ದೇವಸ್ಥಾನಗಳ ರಕ್ಷಣೆಗೆ ಸರ್ಕಾರ, ಜಿಲ್ಲಾಡಳಿತ ಬದ್ಧವಾಗಿದ್ದು, ಐತಿಹಾಸಿಕ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಹಿತದೃಷ್ಟಿಯಿಂದ ಆಸುಪಾಸಿನ ಎಲ್ಲಾ ಕೋರೆಗಳಿಗೆ ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಸೋಮವಾರ ಭೇಟಿ ನೀಡಿದ ಅವರು, ಕಾರಿಂಜದಲ್ಲಿ ಕೆಲವು ದಿನಗಳ ಹಿಂದೆ ಕುಸಿದು ಬಿದ್ದಿರುವ ತಡೆಗೋಡೆ ವೀಕ್ಷಿಸಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಲ್ಲುಕೋರೆ ಹಾಗೂ ಜಲ್ಲಿಕ್ರಷರ್ ನಿಂದ ದೇವಸ್ಥಾನಕ್ಕೆ ಸಮಸ್ಯೆಯಾಗುತ್ತಿದೆ ಎಂಬ ಭಕ್ತಾದಿಗಳ ದೂರಿನ ಹಿನ್ನೆಲೆಯಲ್ಲಿ ಶಾಸಕರ ಜೊತೆ ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿದ್ದೇನೆ.

ಕೋರೆ ತಕ್ಷಣ ಸ್ಥಗಿತಗೊಳಿಸಲು ಅಧಿಕಾರಿಗಳ ಮೂಲಕ ಸೂಚನೆ ನೀಡಲಾಗುವುದು ಎಂದ ಅವರು, ಗಣಿಗಾರಿಕೆಯಿಂದ ದೇವಳಕ್ಕೆ ಹಾಗೂ ಇಲ್ಲಿನ ಬಂಡೆಗಳಿಗೆ ಆಗುವ ತೊಂದರೆ ಬಗ್ಗೆ ಎನ್ಐಟಿಕೆ ತಜ್ಞರಿಂದ ಪರಿಶೀಲನೆ ನಡೆಸಿ ಅವರ ವರದಿಯನ್ನಾಧರಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಕುಸಿದು ಬಿದ್ದಿರುವ ಆವರಣಗೋಡೆಯ ಪುನರ್ ನಿರ್ಮಾಣ ಹಾಗೂ ಅನೇಕ ತುರ್ತು ಕಾಮಗಾರಿ ಶೀಘ್ರ ನಡೆಸುವುದಾಗಿ ಸಚಿವರು ಹೇಳಿದರು.

ಶಾಸಕ ರಾಜೇಶ್ ನಾಯ್ಕ್ ಕೋರಿಕೆಯಂತೆ ಶ್ರೀ ಕಾರಿಂಜೇಶ್ವರ ಕ್ಷೇತ್ರವನ್ನು ಪ್ರವಾಸೋದ್ಯಮಕ್ಕೆ ಸೇರ್ಪಡೆಗೊಳಿಸಲಾಗಿದ್ದು, ತಜ್ಞರ ಸಲಹೆಯೊಂದಿಗೆ ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬೂಡ ಆಧ್ಯಕ್ಷ ದೇವದಾಸ ಶೆಟ್ಟಿ, ಮುಜರಾಯಿ ಇಲಾಖೆ ಸಹಾಯಕ ಕಮಿಷನರ್ ವೆಂಕಟೇಶ್, ಗಣಿ ಇಲಾಖಾಧಿಕಾರಿ ಮಹಾದೇಶ್ವರ, ತಹಸೀಲ್ದಾರ್ ರಶ್ಮಿ ಎಸ್. ಆರ್., ಪ್ರಮುಖರಾದ ಗಣಪತಿ ಮಚ್ಚಿನ್ನಾಯ, ವೆಂಕಟರಮಣ ಮುಚ್ಚಿನ್ನಾಯ, ಶಿವಪ್ಪ ಗೌಡ,ಮೋಹನ್ ಆಚಾರ್ಯ, ಆಡಳಿತಾಧಿಕಾರಿ ನೋಣಯ್ಯ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

26/10/2020 05:13 pm

Cinque Terre

3.78 K

Cinque Terre

0

ಸಂಬಂಧಿತ ಸುದ್ದಿ