ಮುಲ್ಕಿ: ಕೆಮ್ರಾಲ್ ಶಕ್ತಿಕೇಂದ್ರದ ಭಾರತೀಯ ಜನತಾ ಪಕ್ಷದ ಪಂಜ ಬೂತ್ ಸಮಿತಿ ವತಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆ ನಡೆಯಿತು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್, ಕೆಮ್ರಾಲ್ ಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ಹಾಗೂ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅಭಿಲಾಷ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಕಟೀಲು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಅಮರ್ ಶೆಟ್ಟಿ ಪಕ್ಷಿಕೆರೆ , ಮತ್ತಿತರರು ಉಪಸ್ಥಿತರಿದ್ದರು.
ಸುಮಾರು ಮುನ್ನೂರಕ್ಕೂ ಹೆಚ್ಚು ಕುಟುಂಬ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ವಿತರಿಸಲಾಯಿತು.
Kshetra Samachara
26/10/2020 09:23 pm