ಬಂಟ್ವಾಳ: ತಾಲೂಕಿನ ಶಂಭೂರು ಸಹಿತ ನದಿ ತೀರದ ಮುಳುಗಡೆ ಪ್ರದೇಶಗಳನ್ನು ಸರ್ವೆ ಮಾಡಿ ಅವುಗಳನ್ನು ಸದುಪಯೋಗಪಡಿಸಿ, ತಾಲೂಕಿನ ಜಾನುವಾರುಗಳಿಗೆ ಬೇಕಾಗಿರುವ ರಸಮೇವಿಗೆ ಅಗತ್ಯವಿರುವ ಮೆಕ್ಕೆಜೋಳ ಬೆಳೆಸುವ ಯೋಜನೆ ರೂಪಿಸಲು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಬುಧವಾರ ತಾಪಂ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಶುಸಂಗೋಪನೆ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಅವಿನಾಶ್ ಭಟ್ ಅವರಿಂದ ಹಸುಗಳ ಸಹಿತ ಜಾನುವಾರು ಹಾಗೂ ಅವುಗಳಿಗೆ ಬೇಕಾದ ಮೇವಿನ ಕುರಿತು ಮಾಹಿತಿ ಪಡೆದ ಬಳಿಕ ಸೂಚಿಸಿದರು.
ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಸೀಲ್ದಾರ್ ರಶ್ಮಿ ಎಸ್.ಆರ್., ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಆನಂದ ಶಂಭೂರು, ಜೋಕಿಂ ಮಿನೇಜಸ್, ಭಾರತಿ ಚೌಟ, ಯಶವಂತ ನಾಯಕ್, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ಜಿಪಂ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಎಂ.ಎಸ್.ಮಹಮ್ಮದ್, ಮಂಜುಳಾ ಮಾಧವ ಮಾವೆ, ಕಮಲಾಕ್ಷಿ ಪೂಜಾರಿ ಮತ್ತು ರವೀಂದ್ರ ಕಂಬಳಿ ವಿವಿಧ ವಿಷಯಗಳ ಬಗ್ಗೆ ಮಾತನಾಡಿದರು.
Kshetra Samachara
28/10/2020 05:45 pm