ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಮಾರ್ಟ್ ಸಿಟಿ ಕಾಮಗಾರಿ ನೆಪದಲ್ಲಿ ಅನುದಾನ ಬೇಕಾಬಿಟ್ಟಿ ವ್ಯಯ: ವಿಪಕ್ಷ ವಾಗ್ದಾಳಿ

ಮಂಗಳೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ನೆಪದಲ್ಲಿ ಅನುದಾನ ಬೇಕಾಬಿಟ್ಟಿ ವ್ಯಯಿಸುತ್ತಿದ್ದು, ಆ ಬಗ್ಗೆ ಯಾವುದೇ ಮಾಹಿತಿ ದೊರೆಯುತ್ತಿಲ್ಲ. ಈ ಸಂಬಂಧ ಮನಪಾ ಸಾಮಾನ್ಯ ಸಭೆಯಲ್ಲಿ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶೀಘ್ರ ಸ್ಮಾರ್ಟ್ ಸಿಟಿ ಸಂಬಂಧಿಸಿದ ಸಭೆ ಕರೆಯಲಾಗುವುದು ಎಂದು ಮೇಯರ್ ದಿವಾಕರ್ ಪಾಂಡೇಶ್ವರ ತಿಳಿಸಿದ್ದಾರೆ.

ಸಭೆಯಲ್ಲಿ ಸದಸ್ಯ ಅಬ್ದುಲ್ ಲತೀಫ್ ಮಾತನಾಡಿ, ತಮ್ಮ ಪ್ರದೇಶದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಬೇರೆಡೆ ವರ್ಗಾಯಿಸಲಾಗಿದೆ. ಈ ರೀತಿ ಉಪಯೋಗಿಸಲು ಅವಕಾಶವಿದೆಯೇ ಎಂಬ ಪ್ರಶ್ನೆಗೆ ಮೇಯರ್ ಉತ್ತರಿಸಿದರು.

ನಮ್ಮಲ್ಲಿ ತಡೆಗೋಡೆ, ರಸ್ತೆ ಕಾಮಗಾರಿ ಬಾಕಿ ಇದೆ. ಆದರೆ, ಅನುದಾನವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂದು ಲತೀಫ್ ಅಸಮಾಧಾನ ವ್ಯಕ್ತಪಡಿಸಿದರು. ವಿಪಕ್ಷ ನಾಯಕ ಅಬ್ದುಲ್ ರವೂಫ್ ಸೇರಿದಂತೆ ಮನಪಾ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

28/10/2020 11:27 pm

Cinque Terre

4.62 K

Cinque Terre

1

ಸಂಬಂಧಿತ ಸುದ್ದಿ