ಮುಲ್ಕಿ: ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಶಕ್ತಿ ನೀಡಿ, ಮಹಿಳೆಯರಿಗೆ ರಾಜಕೀಯವಾಗಿ ಬೆಳೆಯಲು ಅವಕಾಶ ಕಲ್ಪಿಸಿಕೊಟ್ಟ ದೇಶದ ಉಕ್ಕಿನ ಮಹಿಳೆ ಎಂದೇ ಹೆಸರು ಪಡೆದ ಭಾರತದ ಹೆಮ್ಮೆಯ ಪ್ರಧಾನ ಮಂತ್ರಿ ದಿ. ಇಂದಿರಾ ಗಾಂಧಿಯವರು ನಮಗೆಲ್ಲರಿಗೂ ಆದರ್ಶ ಎಂದು ಅವಿಭಜಿತ ದಕ್ಷಿಣ ಕನ್ನಡದ ಜಿಲ್ಲಾ ಪರಿಷತ್ನ ಮಾಜಿ ಅಧ್ಯಕ್ಷರಾದ ಸುಗಂಧಿ ಕೊಂಡಾಣ ಹೇಳಿದರು.
ಅವರು ಹಳೆಯಂಗಡಿಯಲ್ಲಿರುವ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿ ಸಭಾಭವನದಲ್ಲಿ ನಡೆದ ದಿ. ಇಂದಿರಾ ಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮ ದಿನಾಚರಣೆಯ ಸಂದರ್ಭ ನುಡಿ ನಮನ ಸಲ್ಲಿಸಿ ಮಾತನಾಡಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಧನಂಜಯ ಮಟ್ಟು ಮಾತನಾಡಿ, ಸರ್ದಾರ್ ವಲ್ಲಭ ಭಾಯ್ ಪಟೇಲರು ದೇಶಕ್ಕೆ ನೀಡಿದ ಅಭೂತಪೂರ್ವ ಸೇವೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಇಂದಿನ ಜನಾಂಗಕ್ಕೆ ತಿಳಿಸಬೇಕಾಗಿದೆ ಎಂದರು.
ಕೆಪಿಸಿಸಿ ಕೋ-ಆರ್ಡಿನೇಟರ್ ವಸಂತ್ ಬೆರ್ನಾರ್ಡ್ ಪ್ರಾಸ್ತಾವಿಕ ಮಾತನಾಡಿ, ನುಡಿನಮನ ಕಾರ್ಯಕ್ರಮದ ಔಚಿತ್ವ ತಿಳಿಸಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕೀಂ ಕಾರ್ನಾಡು, ಡಿಸಿಸಿ ಸದಸ್ಯರಾದ ಪುತ್ತುಬಾವ ಕಾರ್ನಾಡು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
31/10/2020 05:44 pm