ಮಂಗಳೂರು: ದೇಶದಲ್ಲಿ ಲವ್ ಜಿಹಾದ್ ಅಸ್ತಿತ್ವದಲ್ಲಿಯೇ ಇಲ್ಲವೆಂದು ಪೊಲೀಸರು, ತನಿಖಾ ಏಜೆನ್ಸಿಗಳು, ಕೇಂದ್ರ ಸರಕಾರ ಹೇಳಿದ್ದರೂ ರಾಜ್ಯ ಸರಕಾರದ ಕೆಲವರು ಲವ್ ಜಿಹಾದ್ ಕುರಿತು ನೀಡುತ್ತಿರುವ ಹೇಳಿಕೆಗಳು ಹಾಸ್ಯಾಸ್ಪದ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ.
ಲವ್ ಜಿಹಾದ್ ಬಗ್ಗೆ ತನಿಖೆ ನಡೆಸಿರುವ ಕೇರಳ, ಕರ್ನಾಟಕ ಪೊಲೀಸರು ಇಂತಹ ಘಟನೆಗಳು ರಾಜ್ಯದಲ್ಲೇ ಇಲ್ಲ. ಇದು ನಿರಾಧಾರ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಕೇಂದ್ರದ ಬಿಜೆಪಿ ಸರಕಾರವೂ ಲವ್ ಜಿಹಾದ್ ಪ್ರಕರಣ ವರದಿಯಾಗಿಲ್ಲ ಎಂಬ ಲಿಖಿತ ಉತ್ತರವನ್ನು ಸಂಸತ್ತಿಗೆ ನೀಡಿತ್ತು. ಹೀಗಿದ್ದರೂ ಕೆಲ ಬಿಜೆಪಿ ನಾಯಕರು ಲವ್ ಜಿಹಾದ್ ಕುರಿತು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಬಿಜೆಪಿ ನಾಯಕರು, ಮುಖಂಡರು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
Kshetra Samachara
06/11/2020 06:32 pm