ಮಂಜೇಶ್ವರ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ವಿರೋಧಿಸಿ ಆಲ್ ಇಂಡಿಯಾ ಕಿಸಾನ್ ಸಭಾ ಕೇರಳ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಯ ಅಂಗವಾಗಿ ಹೊಸಂಗಡಿ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ ವೇಳೆ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ಘಾಟಿಸಿದ ಎಐಕೆಎಸ್ ರಾಜ್ಯ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಚಂದ್ರಹಾಸ ಶೆಟ್ಟಿ ಮಾಸ್ತರ್, ಗೀತಾ ಸಾಮಾನಿ, ಯಾಕೂಬ್ ಕುಂಜತ್ತೂರು, ಹುಸೈನ್ ಮಾಸ್ತರ್, ಪ್ರಭಾಕರ ಶೆಟ್ಟಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.
Kshetra Samachara
06/11/2020 06:37 pm