ಬಂಟ್ವಾಳ: ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ರೈತರಿಗೂ ತುಂಬಾ ಅನುಕೂಲವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.
ಬಿ.ಸಿ. ರೋಡ್‌ನ ಬಿಜೆಪಿ ಕಚೇರಿಯಲ್ಲಿ ರೈತ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ದೇಶದ ರೈತರ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಮೋದಿ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡುವ ಕಾರ್ಯ ರೈತ ಮೋರ್ಚಾದಿಂದ ಆಗಬೇಕು ಎಂದರು.
ಕ್ಷೇತ್ರದ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪ್ರ.ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ ಪೂಜಾರಿ, ಪ್ರ.ಕಾರ್ಯದರ್ಶಿಗಳಾದ ಶಿವಪ್ಪಗೌಡ, ಹರೀಶ್ ಬೇಡಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
06/11/2020 06:44 pm