ಬಂಟ್ವಾಳ: ಸಿದ್ಧಕಟ್ಟೆಯ ಹರ್ಷಲಿ ಸಭಾಂಗಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ತಾಲೂಕು ಅಭ್ಯಾಸವರ್ಗ ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಾ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಹಾಗೂ ಸಂಸ್ಕೃತಿ ಯ ಬಗ್ಗೆ ಪ್ರಜ್ಞೆ ಮೂಡಿಸುವ ಕಾರ್ಯ ಮಾಡುತ್ತಿದೆ ಎಂದರು.
ಕಂಬಳ ಓಟಗಾರಿಕೆ ಮೂಲಕ ಪ್ರಸಿದ್ಧಿ ಪಡೆದು ಕರ್ನಾಟಕ ಕ್ರೀಡಾರತ್ನ ಪುರಸ್ಕೃತ ಸುರೇಶ್ ಎಂ.ಶೆಟ್ಟಿ ಹಕ್ಕೇರಿ ಅವರನ್ನು ಸನ್ಮಾನಿಸಲಾಯಿತು.
ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ಮಂಗಳೂರು ವಿಭಾಗ ಪ್ರಮುಖರಾದ ಕೇಶವ ಬಂಗೇರ ಹಿರಿಯ ಕಾರ್ಯಕರ್ತರಾದ ಶೀತಲ್ ಕುಮಾರ್ ಜೈನ್ ಕಾರ್ಕಳ ಮಾಹಿತಿ ನೀಡಿದರು.
ಸಮಾರೋಪದಲ್ಲಿ ಬಂಟ್ವಾಳ ಹಾಗೂ ಸಿದ್ದಕಟ್ಟೆ ನಗರದ ನೂತನ ಕಾರ್ಯಕಾರಿಣಿಯನ್ನು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ ಘೋಷಿಸಿದರು.
ವಿಭಾಗ ಸಂಚಾಲಕ ಆಶಿಶ್ ಅಜ್ಜಿಬೆಟ್ಟು, ಜಿಲ್ಲಾ ಸಂಚಾಲಕ ಸಂದೇಶ್ ರೈ ಮಜಕ್ಕಾರ್ ಉಪಸ್ಥಿತರಿದ್ದರು.
ಅಭ್ಯಾಸ ವರ್ಗದಲ್ಲಿ ಸಿದ್ದಕಟ್ಟೆ ಪರಿಸರದ ವಿದ್ಯಾರ್ಥಿ ಪರಿಷತ್ ಹಿತೈಷಿಗಳಾದ ರತ್ನಕುಮಾರ್ ಚೌಟ, ಪ್ರಭಾಕರ ಪ್ರಭು, ಉಮೇಶ್ ಗೌಡ, ದೀಪಕ್ ಶೆಟ್ಟಿಗಾರ್, ಮಂದಾರತಿ, ಮಾಧವ ಶೆಟ್ಟಿಗಾರ್, ವಿಶ್ವನಾಥ ಶೆಟ್ಟಿಗಾರ್, ಮಹೇಶ್ ಕರ್ಕೇರ, ಸತೀಶ್ ಪೂಜಾರಿ ಅಳಕೆ, ರಾಜೇಶ್ ಕೊನೆರೊಟ್ಟು ಉಪಸ್ಥಿತರಿದ್ದರು.
Kshetra Samachara
08/11/2020 11:25 am