ಮಂಗಳೂರು: ದ.ಕ. ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯರಾಗಿದ್ದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ನವೆಂಬರ್ 9ರಂದು ಎಐಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ದ.ಕ. ಜಿಲ್ಲಾಧಿಕಾರಿಯಾಗಿದ್ದ ವೇಳೆ 2019 ಸೆ.6ರಂದು ವೈಯಕ್ತಿಕ ಕಾರಣ ಹೇಳಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು.
Kshetra Samachara
08/11/2020 04:14 pm