ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆ; ಸಂಚಾರ ವ್ಯತ್ಯಯ, ಶಾಸಕರಿಂದ ತುರ್ತು ಸಭೆ

ಮಂಗಳೂರು: ಮಂಗಳೂರು ನಗರದಲ್ಲಿ 'ಸ್ಮಾರ್ಟ್ ಸಿಟಿ' ಯೋಜನೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉಂಟಾದ ಟ್ರಾಫಿಕ್ ಜಾಮ್ ಸಮಸ್ಯೆ ಕುರಿತು ಶಾಸಕ ವೇದವ್ಯಾಸ್ ಕಾಮತ್ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು, ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಕೆಯುಡಿಎಫ್‌ಸಿ ಇಲಾಖೆ ಅಧಿಕಾರಿಗಳು ಹಾಗೂ ಬಸ್ ಮಾಲಕರ ಸಂಘದ ಅಧ್ಯಕ್ಷರು ಭಾಗವಹಿಸಿದ್ದರು.

ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯಿಂದ ಸಾರ್ವಜನಿಕರಿಗೆ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ‌ ನೀಡಲಾಗಿದ್ದು, ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಅಲ್ಲದೆ, ವಾಹನ ಸಂಚಾರಕ್ಕೆ ಶೀಘ್ರ ಮಾರ್ಗ ಸೂಚಿ ಸಿದ್ಧಪಡಿಸಿ ಕಾರ್ಯರೂಪಕ್ಕೆ ತರುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಶೆಟ್ಟಿ ಬೋಳೂರು, ಪೂರ್ಣಿಮಾ ಎಂ., ಸಹಾಯಕ ಆಯುಕ್ತ ಮದನ್ ಮೋಹನ್, ಸಂಚಾರ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ನಟರಾಜ್, ಸಂಚಾರ ಪಶ್ಚಿಮ ಪೊಲೀಸ್ ಠಾಣೆ ನಿರೀಕ್ಷಕ ಜಯಾನಂದ, ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಕೆಯುಡಿಎಫ್‌ಸಿ ಅಧಿಕಾರಿಗಳು, ನಾಗರಿಕ ಹಿತರಕ್ಷಣಾ ಸಮಿತಿಯ ಹನುಮಂತ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

10/11/2020 12:38 pm

Cinque Terre

6.37 K

Cinque Terre

0

ಸಂಬಂಧಿತ ಸುದ್ದಿ