ಮುಲ್ಕಿ: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಡ್ಯಾರ್ ನಿಂದ ನೇರವಾಗಿ ಪಕ್ಕದ ವಿಧಾನಸಭಾ ಕ್ಷೇತ್ರದ ಹರೇಕಳಕ್ಕೆ ಸಂಪರ್ಕಿಸಲು ಸೇತುವೆ ನಿರ್ಮಾಣವಾಗಲಿದ್ದು, ಕಾಮಗಾರಿಯ ಪ್ರಗತಿಯನ್ನು ಶಾಸಕ ಡಾ.ವೈ. ಭರತ್ ಶೆಟ್ಟಿಯವರು ಅಧಿಕಾರಿಗಳು, ಸ್ಥಳೀಯ ಮುಖಂಡರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.
ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್, ಹಿರಿಯ ಮುಖಂಡ ಪ್ರದೀಪ್ ಕುಮಾರ್ ಶೆಟ್ಟಿ, ಮಂಡಲ ಸದಸ್ಯ ಪ್ರಸನ್ನ ಅಡ್ಯಾರ್, ಶಕ್ತಿ ಕೇಂದ್ರ ಪ್ರಮುಖರಾದ ಅಜಿತ್ ಶೆಟ್ಟಿ ಅಡ್ಯಾರ್ ಗುತ್ತು, ಯಾದವ ಸಾಲಿಯಾನ್, ಸಹ ಪ್ರಮುಖರಾದ ಗಣೇಶ್ ರೈ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/11/2020 02:50 pm