ಕಾಸರಗೋಡು: ಜ್ಯುವೆಲ್ಲರಿ ಠೇವಣಿ ಇರಿಸಿದ್ದ ಗ್ರಾಹಕರಿಗೆ ವಂಚಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಂಜೇಶ್ವರ ಶಾಸಕ ಎಂ.ಸಿ.ಕಮರುದ್ದೀನ್ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ತದೊತ್ತಡ ಅಧಿಕಗೊಂಡ ಹಿನ್ನೆಲೆಯಲ್ಲಿ ಕಮರುದ್ದೀನ್ ಅವರನ್ನು ಕಾಞಂಗಾಡ್ ಜಿಲ್ಲಾ ಜೈಲಿನಿಂದ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಮೇಹ ಪ್ರಮಾಣ ಹೆಚ್ಚಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯ ಬಿದ್ದಲ್ಲಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Kshetra Samachara
17/11/2020 06:04 pm