ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ ಪುರಸಭಾಧ್ಯಕ್ಷ ಶರೀಫ್, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಪುರಸಭಾಧ್ಯಕ್ಷರಾಗಿ ಮಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷರಾಗಿ ಜೆಸಿಂತಾ ಡಿಸೋಜ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ಮಾತನಾಡಿದ ಅವರು ಪುರಸಭೆಯನ್ನು ಮಾಜಿ ಸಚಿವ ರಮಾನಾಥ ರೈ ಮಾರ್ಗದರ್ಶನದಲ್ಲಿ ಮಾದರಿ ಪುರಸಭೆಯನ್ನಾಗಿಸುವ ಭರವಸೆ ನೀಡಿ, ಸಹಕಾರ ನೀಡಿದ ಎಸ್.ಡಿ.ಪಿ.ಐ.ಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಶುಭ ಹಾರೈಸಿದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಬಂಟ್ವಾಳ ಪುರಸಭೆಯಲ್ಲಿ ಯಾವುದೇ ಕೆಲಸಗಳಾಗದೆ ನಿಸ್ತೇಜ ಸ್ಥಿತಿಗೆ ಬಂದಿದ್ದು, ತಾನು ಶಾಸಕನಾಗಿದ್ದಾಗ, ಸಮಗ್ರ ಕುಡಿಯುವ ನೀರಿನ ಯೋಜನೆ, ರಸ್ತೆ ಅಭಿವೃದ್ಧಿ, ಪಾರ್ಕ್ ಸಹಿತ ಹಲವು ಅಭಿವೃದ್ಧಿ ಕಾರ್ಯಗಳು ಹಾಗೂ ಪುರಸಭೆಗೆ ಅನುದಾನ ನೀಡಿದ್ದನ್ನು ಸ್ಮರಿಸಿದರು. ಮೇಲ್ಕಾರ್ ಸೌಂದರ್ಯ ವೃದ್ಧಿ, ಬೈಪಾಸ್ ರಸ್ತೆ ನಿರ್ಮಾಣವಾದದ್ದನ್ನು ಸ್ಮರಿಸಿದರು.

ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಪದ್ಮಶೇಖರ ಜೈನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭೆ ಮಾಜಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಜೋಸ್ಪಿನ್ ಡಿಸೋಜ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮಾಣಿ, ತಾಪಂ ಸದಸ್ಯ ಸಂಜೀವ ಪೂಜಾರಿ ಮತ್ತಿತರರು ಆಗಮಿಸಿ ಶುಭ ಕೋರಿದರು.

ಪುರಸಭೆ ಸಿಬಂದಿ ರಜಾಕ್ ಸ್ವಾಗತಿಸಿದ

Edited By : Nirmala Aralikatti
Kshetra Samachara

Kshetra Samachara

18/11/2020 06:15 pm

Cinque Terre

11.12 K

Cinque Terre

0

ಸಂಬಂಧಿತ ಸುದ್ದಿ