ಬಂಟ್ವಾಳ: ಪಕ್ಷದ ಸಂಘಟನೆಯೊಂದಿಗೆ ರಾಷ್ಟ್ರವನ್ನು ಕಟ್ಟುವ ಕಾರ್ಯವನ್ನು ಬಿಜೆಪಿ ಮಾಡುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕಲ್ಲಡ್ಕದ ಏಡ್ಲ ಪದ್ಮಾಂಗಣದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಎರಡು ಗ್ರಾಮಗಳ ಕುಟುಂಬ ಮಿಲನ ಕಾರ್ಯಕ್ರಮ ಹಾಗೂ ಕ್ಷೇತ್ರದ ಕುಟುಂಬ ಮಿಲನ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಬಿಜೆಪಿಗೆ ಶಕ್ತಿಕೊಟ್ಟ ಗ್ರಾಮವಾಗಿ ಗೋಳ್ತಮಜಲು ಗ್ರಾಮ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.
ಕನಿಷ್ಠ ಅವಧಿಯಲ್ಲಿ ಗರಿಷ್ಠ ಅನುದಾನದ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಪ್ರಧಾನಿ ಮೋದಿಯವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಗ್ರಾ.ಪಂ.ನಲ್ಲಿ ನಾವು ಬಿಜೆಪಿ ಬೆಂಬಲಿಸಬೇಕಿದೆ ಎಂದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
Kshetra Samachara
23/11/2020 07:33 pm