ಮೂಡುಬಿದಿರೆ: ಕಡಂದಲೆ ಗ್ರಾಮದ ಶಾಂಭವಿ ನದಿಯಲ್ಲಿ ಮಂಗಳವಾರ ನಾಲ್ಕು ಎಳೆಯ ಜೀವಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಕ್ಕೆ ಮರಳು ದಂಧೆಯೇ ಕಾರಣವಾಗಿದೆ.
ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ ಮೊತ್ತ ಒದಗಿಸಬೇಕು ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಒತ್ತಾಯಿಸಿದ್ದಾರೆ.
ಈ ಪರಿಸರದಲ್ಲಿ ಭಾರಿ ಪ್ರಮಾಣದಲ್ಲಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆದಿರುವುದರಿಂದ ಅಪಾಯಕಾರಿ ಹೊಂಡಗಳು ಸೃಷ್ಟಿಯಾಗಿದ್ದು, ಇದರ ಅರಿವಿಲ್ಲದೆ ನೀರಿಗಿಳಿದ ಅಮಾಯಕರು ಬಲಿಯಾಗಿದ್ದಾರೆ.
ಇಂತಹ ಪ್ರಕರಣಗಳು ಜಿಲ್ಲೆಯ ಹಲವೆಡೆ ನಡೆದಿದೆ. ಇಂತಹ ದುರ್ಘಟನೆಗಳಿಗೆ ಜಿಲ್ಲಾಡಳಿತವೇ ಹೊಣೆಯಾಗಿದ್ದು, ಮರಳು ಹೊಂಡಗಳಿಗೆ ಜನರು ಬಲಿಯಾಗದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
Kshetra Samachara
25/11/2020 10:50 pm