ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ರಾಪಂ ಚುನಾವಣೆ ಹಿನ್ನೆಲೆ: ಅಧಿಕಾರಿಗಳಿಗೆ ತರಬೇತಿ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬಂಟ್ವಾಳ ತಾಲೂಕಿನ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ತಾಲೂಕು ಪಂಚಾಯಿತಿ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು.

ಒಟ್ಟು 57 ಚುನಾವಣಾಧಿಕಾರಿಗಳು ಮತ್ತು 61 ಮಂದಿ ಸಹಾಯಕ ಚುನಾವಣಾಧಿಕಾರಿಗಳಿಗೆ ಎರಡು ಅವಧಿಗಳಲ್ಲಿ ತರಬೇತಿಯನ್ನು ಮಾಸ್ಟರ್ ಟ್ರೈನರ್ ಗಳಾದ ಸನತ್ ರಾಮ್, ಮೋಹನ್ ಎನ್., ಉದಯ ಕುಮಾರ್ ನಡೆಸಿದರು.

ಈ ಸಂದರ್ಭ ಐಎಎಸ್ ಪ್ರೊಬೆಷನರಿ ಅಧಿಕಾರಿ ಮೋನಾ ರೋಚ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಂಟ್ವಾಳ ಕಂದಾಯ ಇಲಾಖೆಯ ಚುನಾವಣಾ ಶಾಖೆ ಉಪತಹಶೀಲ್ದರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ಚುನಾವಣಾ ಶಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

26/11/2020 11:40 pm

Cinque Terre

4.13 K

Cinque Terre

0

ಸಂಬಂಧಿತ ಸುದ್ದಿ