ಮಂಗಳೂರು: ಪುತ್ತೂರು ಪೊಲೀಸ್ ಠಾಣೆಯಲ್ಲಿ ಪೊಲೀಸರ ವೇಷದಲ್ಲಿರುವ ಆರ್ ಎಸ್ ಎಸ್ ಸ್ವಯಂ ಸೇವಕರನ್ನು ಹೊರದಬ್ಬಬೇಕೆಂದು ಎಸ್ ಡಿಪಿಐ ಜಿಲ್ಲಾ ಮುಖಂಡ ರಿಯಾಝ್ ಫರಂಗಿಪೇಟೆ ಅವರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, "ಹೋರಾಟವನ್ನು ದಮನಿಸುವ ಮೋದಿ ನೀತಿಯನ್ನು ಅನುಸರಿಸುತ್ತಿರುವ ಪೊಲೀಸರ ವೇಷದಲ್ಲಿರುವ ಆರ್ ಎಸ್ ಎಸ್ ಸ್ವಯಂ ಸೇವಕರನ್ನು ಗುರುತಿಸಿ, ಹೊರದಬ್ಬುವ ಕೆಲಸ spdkpolice ಅವರಿಂದ ನಿರೀಕ್ಷಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.
ಪುತ್ತೂರಿನಲ್ಲಿ ವಿದ್ಯಾರ್ಥಿ ಸಂಘಟನೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿ ಮುಖಂಡರ ಮೇಲೆ ಪೊಲೀಸರು ಕೈ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.
Kshetra Samachara
29/11/2020 09:07 am