ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವಂತೆ ಬಿಲ್ಲವ ಮುಖಂಡರ ನಿಯೋಗವೊಂದು ಇಂದು ಬಿಜೆಪಿ ರಾಜ್ಯಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದ್ದು, ಇದಕ್ಕೆ ಸಂಸದರು ಕೂಡ ಸ್ಪಂದನೆ ನೀಡಿದ್ದಾರೆ.
ಮಂಗಳೂರಿನ ಸರ್ಕಿಟ್ ಹೌಸ್‌ನಲ್ಲಿ ದಕ್ಷಿಣ ಕನ್ನಡದ ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಪೀಠಾದಿ ಪತಿಗಳಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾರ್ಗದರ್ಶನದಲ್ಲಿ ಕಂಕನಾಡಿ ಗರೋಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಜಿತ್ತರಂಜನ್ ಅವರ ನೇತ್ರತ್ವದಲ್ಲಿ ಬಿಲ್ಲವ ಮುಖಂಡರ ನಿಯೋಗವು ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿತು. ಈ ವೇಳೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿತು.
ಈ ವೇಳೆ ನಳಿನ್ ಕುಮಾರ್ ಕಟೀಲ್ ಅವರು, ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡುವ ಬಗ್ಗೆ ಈಗಾಗಲೇ ಜಿಲ್ಲೆಯಲ್ಲಿ ಬಹಳಷ್ಟು ಚರ್ಚೆಗಳು ನಡೆಯತ್ತಿದೆ. ಅಷ್ಟೇ ಅಲ್ಲದೆ ಬೇರೆ ಹೆಸರುಗಳ ಬಗ್ಗೆಯೂ ಪ್ರಸ್ತಾಪ ಕೆಲವರು ಮಾಡಿದ್ದಾರೆ. ನಾನು ಕೋಟಿ ಚೆನ್ನಯ್ಯ ಬಗ್ಗೆ ಅಪಾರ ಭಕ್ತಿ ಹೊಂದಿದ್ದೇನೆ. ಹೀಗಾಗಿ ಈ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
Kshetra Samachara
02/12/2020 10:08 pm