ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಮುಂದಿಟ್ಟುಕೊಂಡು ಡಿ.8ರಂದು ಭಾರತ್ ಬಂದ್‌ಗೆ ಕರೆಕೊಟ್ಟಿರುವುದು ರೈತರನ್ನು ದಾರಿ ತಪ್ಪಿಸುವ ಹತಾಶ ಪ್ರಯತ್ನ ಎಂದು ಬಿಜೆಪಿ ಮುಖಂಡ ಕ್ಯಾ. ಗಣೇಶ ಕಾರ್ಣಿಕ್ ಹೇಳಿದ್ದಾರೆ.
ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂದ್‌ನ ಮೂಲಕ ರೈತರಿಗೆ ಮೋಸ ಮಾಡಲಾಗುತ್ತಿದೆ. ದೇಶದಲ್ಲಿ ರೈತರಿಗೆ ಮಾರುಕಟ್ಟೆ ಸಮಸ್ಯೆ, ಬೆಳೆಗೆ ಸೂಕ್ತ ಬೆಲೆ ಸಿಗುತ್ತಿರಲಿಲ್ಲ.
ದಾಸ್ತಾನು ಮಾಡುವುದಕ್ಕೆ ವ್ಯವಸ್ಥೆ ಇರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ನೂತನ ಕಾಯ್ದೆಗಳ ಮೂಲಕ ರೈತರಿಗೆ ಅನುಕೂಲ ಮಾಡಿ ಕೊಟ್ಟಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರವಿಶಂಕರ ಮಿಜಾರ್, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ ಶೇಣವ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
07/12/2020 10:30 pm