ಶಿವಮೊಗ್ಗ: ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಬಗ್ಗೆ ಕಾನೂನು ಜಾರಿ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸಾಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಲವ್ ಜಿಹಾದ್ ಸಂಬಂಧ ನೂತನ ಕಾನೂನು ಜಾರಿಗೊಳಿಸುವುದಾಗಿ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಈ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಅಧಿವೇಶನದಲ್ಲಿಯೇ ಗೋಹತ್ಯಾ ನಿಷೇಧ ಮಾಡಲು ರಾಜ್ಯಪಾಲರ ಅನುಮತಿಗಾಗಿ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲರು ಅಂಗೀಕರಿಸಿಲ್ಲದ ಕಾರಣ ಈ ಅಧಿವೇಶನದಲ್ಲಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗುವುದು ಎಂದರು.
Kshetra Samachara
07/12/2020 10:50 pm