ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ಹೆಸರಿಡಿ; ಶಾಸಕ ಉಮಾನಾಥ್

ಮೂಡುಬಿದಿರೆ: ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ,-ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲ ಇದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.

ಈ ವಿಷಯದಲ್ಲಿ ಜನಾಭಿಪ್ರಾಯಕ್ಕೆ ಸ್ಪಂದಿಸಿ ನಾನು ಸೇರಿದಂತೆ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ. ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡಲು ಜಿಲ್ಲೆಯ ಜನರು, ಜಾತಿ-ಮತ ಮರೆತು ಹೋರಾಟ ನಡೆಸಿದಾಗ ಹೆಚ್ಚಿನ ಬೆಂಬಲ ಸಿಗುತ್ತದೆ ಎಂದು ಹೇಳಿದರು.

Edited By : Nagaraj Tulugeri
Kshetra Samachara

Kshetra Samachara

08/12/2020 12:36 pm

Cinque Terre

4.74 K

Cinque Terre

0

ಸಂಬಂಧಿತ ಸುದ್ದಿ