ಮೂಡುಬಿದಿರೆ: ಮೂಡುಬಿದಿರೆ ಬ್ಲಾಕ್ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ವಕೀಲ ಜಯ ಕುಮಾರ್ ಶೆಟ್ಟಿ ದರೆಗುಡ್ಡೆ ಅವರನ್ನು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.
ದರೆಗುಡ್ಡೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿರುವ ಜಯ ಕುಮಾರ್ ಶೆಟ್ಟಿ, ಯುವ ಬಂಟರ ಸಂಘ ಮೂಡುಬಿದಿರೆ, ದರೆಗುಡ್ಡೆ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘ, ಮೂಡುಬಿದಿರೆ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷರಾಗಿ ಹಾಗೂ ವಿವಿಧ ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Kshetra Samachara
16/12/2020 12:32 pm