ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಕಾಂಗ್ರೆಸ್ ಎಂದಿಗೂ ಗೂಂಡಾ ಸಂಸ್ಕೃತಿ ಅನುಸರಿಸಿಲ್ಲ ; ಯು.ಟಿ.ಖಾದರ್

ಬಂಟ್ವಾಳ : ಕಾಂಗ್ರೆಸ್ ಎಂದಿಗೂ ಗೂಂಡಾ ಪ್ರವೃತ್ತಿ ಮಾಡಿಲ್ಲ. ಮಾಡುವುದೂ ಇಲ್ಲ. ಅದು ನಮ್ಮ ಸಂಸ್ಕೃತಿಯಲ್ಲ.

ಕಾಂಗ್ರೆಸ್ ಆಡಳಿತ ಇದ್ದಾಗ ನಡೆಯದ ಘಟನೆ ಬಿಜೆಪಿ ಸರ್ಕಾರ ಬಂದಾಗ ನಡೆದಿದೆ. ಬಿಜೆಪಿ ಆಡಳಿತದಲ್ಲಿ ಜನರಿಗೆ, ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದಂತಾಗಿದೆ.

ನಳಿನ್ ಕುಮಾರ್ ಕಟೀಲ್ ಗೆ ಕನಸಿನಲ್ಲೂ ಕಾಂಗ್ರೆಸ್ ಹೆಸರು ಬರುತ್ತಿದೆ. ಯಾವುದೇ ಘಟನೆ ನಡೆದಾಗ ಕಾಂಗ್ರೆಸ್ ಪಕ್ಷವನ್ನು ದೂರುವುದು ನಳಿನ್ ಗೆ ಮಾಮೂಲಾಗಿದೆ ಎಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಹೇಳಿದರು.

ವಿಟ್ಲದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಮತದಾರರು ನೀಡುವ ಪ್ರತಿ ಮತವೂ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಲಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಹಲವು ಜನಪರ ಕಾರ್ಯಕ್ರಮ ಬಿಜೆಪಿ ನಿಲ್ಲಿಸಿದೆ.

ರೇಶನ್ ಕಾರ್ಡ್ ವಿತರಣೆಯಾಗಿಲ್ಲ. ಮನೆ ಹಸ್ತಾಂತರ ಮಾಡಿಲ್ಲ. ಪಿಂಚಣಿ ಕೂಡ ಬಡವರಿಗೆ ದೊರೆಯುತ್ತಿಲ್ಲ. ಮರಾಠಿ ನಿಗಮ ಸ್ಥಾಪಿಸಲು ನಮ್ಮ ವಿರೋಧವಿಲ್ಲ.

ಆದರೆ, ಗಡಿಭಾಗದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕ್ರಮ ಕೈಗೊಳ್ಳಬೇಕು. ಆದಾದ ಬಳಿಕ ನಿಗಮ ಮಂಡಳಿ ಸ್ಥಾಪನೆ ಮಾಡಲಿ ಎಂದರು.

ಕೇಂದ್ರ ಸರ್ಕಾರದಿಂದ ಬ್ಯಾಂಕ್ ಗಳ ವಿಲೀನವಾಗಿದೆ. ಪೆಟ್ರೋಲ್, ಅಡುಗೆ ಅನಿಲ, ದಿನಸಿ ಇತ್ಯಾದಿ ದರ ಗಗನಕ್ಕೇರಿದೆ. ಕೃಷಿ ಮಸೂದೆ ಮೂಲಕ ದೇಶದ ಬೆನ್ನೆಲುಬಾದ ರೈತರನ್ನು ಬೀದಿಪಾಲು ಮಾಡಲಾಗುತ್ತಿದೆ.

ಬಿಜೆಪಿ ಸರ್ಕಾರ ಬಂದ ಬಳಿಕ ಅದಾನಿ, ಅಂಬಾನಿ ಅವರ ಆಸ್ತಿ ಹೆಚ್ಚಳವಾಗಿದೆ. ಈಗಾಗಲೇ ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರಿಗೆ ಅಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣಗೊಂಡು ಮತ್ತೆ ನಮ್ಮ ಪಕ್ಷಕ್ಕೆ ಮರಳಲಿದ್ದಾರೆ ಎಂದರು.

ದ.ಕ. ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಲೀಂ, ಗಿರೀಶ್ ಶೆಟ್ಟಿ, ಲತೀಫ್, ಜಿಪಂ ಸದಸ್ಯ ಎಂ.ಎಸ್ . ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿವಿಧ ವಲಯ ಕಾಂಗ್ರೆಸ್ ಅಧ್ಯಕ್ಷರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

16/12/2020 06:16 pm

Cinque Terre

5.78 K

Cinque Terre

5

ಸಂಬಂಧಿತ ಸುದ್ದಿ