ಬಂಟ್ವಾಳ : ಬಂಟ್ವಾಳ ತಾಪಂ ಸದಸ್ಯ, ಕಾಂಗ್ರೆಸ್ ಮುಖಂಡ ಕುಮಾರ್ ಭಟ್ ಬದಿಕೋಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವಿಟ್ಲದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಕುಮಾರ್ ಭಟ್, ತಾನು ಗ್ರಾಪಂ ಸಭೆಗೆ ಪ್ರವೇಶಿಸಬಾರದು ಎಂಬ ನಿರ್ಣಯ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಪಂಚಾಯಿತಿ ಚುನಾವಣೆ ನಿಂತಾಗ ಪಕ್ಷದಿಂದ ಯಾವುದೇ ಬೆಂಬಲ ದೊರೆಯದೇ ಇರುವುದು, ನಿಷ್ಠಾವಂತರಿಗೆ ಬೆಲೆ ಇಲ್ಲದೇ ಇರುವುದು, ಕ್ಷೇತ್ರದ ಅಭಿವೃದ್ಧಿಗೆ ಕೆಲವರಿಂದ ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು. ಇದೀಗ ಕನ್ಯಾನ ಗ್ರಾಮ ಪಂಚಾಯಿತಿಗೆ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದೇನೆ ಎಂದರು.
Kshetra Samachara
17/12/2020 03:27 pm