ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾವೆ ಹಾಗೂ ಅವರ ಪತಿ, ಕಾಂಗ್ರೆಸ್ ಮುಖಂಡ ಮಾಧವ ಮಾವೆ ಮತ್ತು ಇಲ್ಲಿನ ತಾಲೂಕು ಪಂಚಾಯತ್ ಕನ್ಯಾನ ಕ್ಷೇತ್ರದ ಸದಸ್ಯ ಕುಮಾರ್ ಭಟ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಮಂಜುಳಾ ಮಾವೆ ಕಾಂಗ್ರೆಸ್ ನಿಂದ ಎರಡು ಬಾರಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಆಯ್ಕೆಯಾದವರು.
ಮಾಜಿ ಸಚಿವ ಬಿ.ರಮಾನಾಥ ರೈಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ತಾಲೂಕು ಪಂಚಾಯತ್ ಕಾಂಗ್ರೆಸ್ ಸದಸ್ಯ ಕುಮಾರ್ ಭಟ್ ಕೂಡಾ ಇತ್ತೀಚಿಗೆ ವಿಟ್ಲದಲ್ಲಿ ಸುದ್ದಿಗೋಷ್ಠಿ ನಡೆಸಿ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳೇಪಾಡಿ, ಬಿಜೆಪಿ ಮುಖಂಡರಾದ ಕಸ್ತೂರಿ ಪಂಜ, ಜಗದೀಶ್ ಶೇಣವ, ರವಿಶಂಕರ್ ಮಿಜಾರ್, ರಾಜೇಶ್ ಕಾವೇರಿ, ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
19/12/2020 10:19 am