ಮುಲ್ಕಿ: ಮುಲ್ಕಿ ಹೋಬಳಿಯ ಕಿಲ್ಪಾಡಿ ಪಂಚಾಯತ್ ಚುನಾವಣೆಯ ಪ್ರಚಾರ ಅಬ್ಬರ, ಆರೋಪ-ಪ್ರತ್ಯಾರೋಪ ತಾರಕಕ್ಕೇರಿದ್ದು,
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮೋಹನ್ ಕುಬೆವೂರು ವಿರುದ್ಧ ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ದೂರಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಆಟೋರಿಕ್ಷಾ ಚಿಹ್ನೆಯಲ್ಲಿ ಸ್ಪರ್ಧಿಸಿರುವ ಮೋಹನ್ ಕುಬೆವೂರು
ಕಿಲ್ಪಾಡಿ ಪಂಚಾಯತ್ ಚುನಾವಣೆಯಲ್ಲಿ ಒಂದನೇ ವಾರ್ಡಿನಿಂದ ಸ್ಪರ್ಧಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ದುಷ್ಕರ್ಮಿಗಳು ಬೇನಾಮಿ ಕರಪತ್ರ ಮುದ್ರಿಸಿ ತಾನು
ಸ್ಪರ್ಧಿಸಿರುವ ವಾರ್ಡಿನಲ್ಲಿ
ಹಂಚುತ್ತಿರುವುದೇ ಅಲ್ಲದೆ ಸುಳ್ಳು ಸುದ್ಧಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ಮಾತನಾಡಿ " ನನಗೆ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಬಿಜೆಪಿ ಪಕ್ಷಕ್ಕೆ ಯಾವುದೇ ಸಂಬಂಧ ಇರುವುದಿಲ್ಲ. ನನ್ನ ವಾರ್ಡಿನ ಜನರ ಪ್ರೀತಿ-ವಿಶ್ವಾಸ ಕ್ಕೆ ತಲೆ ಬಾಗಿ ಎಲ್ಲ ಜಾತಿ ಧರ್ಮದವರ ಸೇವೆಗಾಗಿ ಕುಬೆವೂರು ಒಂದನೇ ವಾರ್ಡಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಟೋರಿಕ್ಷಾದ ಚಿಹ್ನೆಯಲ್ಲಿ ಸ್ಪರ್ಧಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ
ಹಾಗೂ ನಾನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಲ್ಲ ಎಂದು ಯಾವುದೇ ಪುಣ್ಯ ಕ್ಷೇತ್ರದಲ್ಲಿ ಪ್ರಮಾಣಕ್ಕೆ ಸಿದ್ಧನಿದ್ದೇನೆ. ನನ್ನ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಮೋಹನ್ ಕುಬೆವೂರು ಎಚ್ಚರಿಕೆ ನೀಡಿದ್ದಾರೆ.
Kshetra Samachara
20/12/2020 09:10 am