ಪುತ್ತೂರು: ರೈತರು ತಮ್ಮ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಬಗ್ಗೆ ನೈಜ ಕಾಳಜಿ ಇಲ್ಲ. ಹೀಗಿರುವಾಗ ಸರಕಾರಗಳು ಲಿಖಿತ ಹೇಳಿಕೆ ನೀಡಲಿ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಬುಧವಾರ ನಗರದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿ, ದೇಶದ ಬೆನ್ನೆಲುಬಾಗಿರುವ ರೈತರ ಕುರಿತು ಸಂಸದೆ ಶೋಭಾ ಕರಂದ್ಲಾಜೆ ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ರೈತರಿಂದ ರಾಷ್ಟ್ರೀಯತೆಗೆ ಧಕ್ಕೆ ಆಗುತ್ತಿದೆ ಎಂಬ ಹೇಳಿಕೆ ನೀಡುತ್ತಿರುವ ಶೋಭಾ ಕರಂದ್ಲಾಜೆ ಅವರು ಇದಕ್ಕೆ ಪೂರಕ ದಾಖಲೆ ನೀಡಬೇಕು. ಇಲ್ಲದಿದ್ದಲ್ಲಿ ರೈತರ ಕ್ಷಮೆ ಯಾಚಿಸಬೇಕು. ರೈತರ ಬೇಡಿಕೆಗಳ ಮನವಿಯನ್ನು ಅವರು ಜನರ ಮುಂದೆ ಬಹಿರಂಗಗೊಳಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಬಡಗನ್ನೂರು, ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಪಕ್ಷದ ಚುನಾವಣಾ ಉಸ್ತುವಾರಿ ಗಿರೀಶ್ ಶೆಟ್ಟಿ, ಶುಕೂರ್ ಹಾಜಿ ಉಪಸ್ಥಿತರಿದ್ದರು.
Kshetra Samachara
23/12/2020 06:08 pm