ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೋಟೊಗ್ರಾಫರ್ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಶಾಸಕರ ಸೂಚನೆ

ಮುಲ್ಕಿ: ಮಂಗಳೂರು ಹೊರವಲಯದ ಪುದು ಶಕ್ತಿಕೇಂದ್ರದ ಬಿಜೆಪಿ ಸೋಶಿಯಲ್ ಮೀಡಿಯಾ ಸಂಚಾಲಕ ಫರಂಗಿಪೇಟೆಯಲ್ಲಿ ಸ್ಟುಡಿಯೋ ಹೊಂದಿರುವ ದಿನೇಶ್ ಕೊಟ್ಟಿಂಜ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಾಯಾಳು ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ಡಾ.ವೈ. ಭರತ್ ಶೆಟ್ಟಿಯವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಮಾತುಕತೆ ನಡೆಸಿ ಸೂಕ್ತ ಚಿಕಿತ್ಸೆ ಸಿಗುವಂತೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ.

ಬಳಿಕ ಉನ್ನತ ಪೊಲೀಸ್ ಅಧಿಕಾರಿಗಳೊಡನೆ ಮಾತನಾಡಿ, ಈ ದುರ್ಘಟನೆಗೆ ಕಾರಣರಾದ ಎಲ್ಲ ಹಲ್ಲೆಕೋರರನ್ನು ತಕ್ಷಣ ಬಂಧಿಸುವಂತೆ ಸೂಚಿಸಿದ್ದಾರೆ.

ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಾ.ಭರತ್, ದ. ಕ.ದಲ್ಲಿ ಶಾಂತಿ ಸುವ್ಯವಸ್ಥೆ ಕದಡಲು ಮತೀಯ ಶಕ್ತಿಗಳು ಪ್ರಯತ್ನಿಸುತ್ತಿದ್ದು, ಪೊಲೀಸ್ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳಲು ಆದೇಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.

ಈ ಸಂದರ್ಭ ಆಸ್ಪತ್ರೆಗೆ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಮಂಗಳೂರು ವಿಧಾನಸಭಾ ಕ್ಷೇತ್ರದ ಭಾಜಪಾ ಅಧ್ಯಕ್ಷ ಚಂದ್ರಹಾಸ್ ಪಂಡಿತ್, ಬಿಜೆಪಿ ಮುಖಂಡ ಸತೀಶ್ ಕುಂಪಲ ಹಾಗೂ ಕಾರ್ಯಕರ್ತರು ಭೇಟಿ ನೀಡಿದರು.

Edited By : Nirmala Aralikatti
Kshetra Samachara

Kshetra Samachara

29/10/2020 07:24 am

Cinque Terre

14.34 K

Cinque Terre

1

ಸಂಬಂಧಿತ ಸುದ್ದಿ